ಪ್ರಮುಖ ಸುದ್ದಿ

ಇಂದಿನಿಂದ ಈ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ.!

ಬೆಂಗಳೂರು: ಇಂದಿನಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಜೂನ್ 1ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಜಿಲ್ಲಾ ಸುದ್ದಿ

ಜಿ.ಪಂ ಅಧ್ಯಕ್ಷರಾಗಿ ಶಶಿಕಲಾ ಸುರೇಶ್ ಬಾಬು ಆಯ್ಕೆ

  ಚಿತ್ರದುರ್ಗ: ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿ ಶಶಿಕಲಾ ಸುರೇಶ್ ಬಾಬು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ವಿ.ಪಿ. ಇಕ್ಕೇರಿ ಘೋಷಣೆ ಮಾಡಿದ್ದಾರೆ.

ಕೃಷಿ

ಕೃಷಿ ಚಟುವಟಿಕೆಗಳಿಗೆ ವಿನಾಯಿತಿ

  ನವದೆಹಲಿ: ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ದೇಶಾದ್ಯಂತ ಲಾಕ್​ಡೌನ್ ಘೋಷಿಸಿದ್ದು, ಕೃಷಿ ಸಂಬಂಧಿತ ಎಲ್ಲಾ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಲಾಕ್​ಡೌನ್ ನಿಂದ ವಿನಾಯಿತಿ ನೀಡಿದೆ. ಕೃಷಿಯನ್ನು ಅಗತ್ಯ ಸೇವೆ ಅಡಿ ಸೇರಿಸಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಕೆಲಸ ಮಾಡಬಹುದು. ಸಗಟು ಖರೀದಿದಾರರು, ರಸಗೊಬ್ಬರ ಮತ್ತು ಕೀಟನಾಶಕ ಅಂಗಡಿಗಳು ಮತ್ತು ಬೀಜ ಮಾರುಕಟ್ಟೆಗಳು ಕಾರ್ಯನಿರ್ವಹಿಸಬಹುದು.