ಚಿತ್ರದುರ್ಗ: ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ ಇವರ ವತಿಯಿಂದ ಉಚಿತ ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ ಶಿಬಿರವನ್ನು ಬಾಗಲಕೋಟೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಆಯೋಜಿಸಲಾಗಿದ್ದು, ಆಸಕ್ತರು ಭಾಗವಹಿಸಬಹುದು.

ರೈತರು, ಸ್ವಸಹಾಯ ಸಂಘದ ಸದಸ್ಯರು, ಯುವಕರಿಗೆ ತರಬೇತಿ ಆಯೋಜಿಸಲಾಗಿದ್ದು, ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಗೆ ಬಾಗವಹಿಸಲು ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. 9482630790 ಗೆ ಕರೆ ಮಾಡಿ ಸೆ. 30 ರೊಳಗೆ ಹೆಸರು ನೋಂದಾಯಿಸಬೇಕು.

ಹೆಚ್ಚಿನ ಮಾಹಿತಿಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ ದೂರವಾಣಿ 08354-244028/244048 ಕ್ಕೆ ಸಂಪರ್ಕಿಸಬಹುದು ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.