ನವದೆಹಲಿ: ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ದೇಶಾದ್ಯಂತ ಲಾಕ್​ಡೌನ್ ಘೋಷಿಸಿದ್ದು, ಕೃಷಿ ಸಂಬಂಧಿತ ಎಲ್ಲಾ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಲಾಕ್​ಡೌನ್ ನಿಂದ ವಿನಾಯಿತಿ ನೀಡಿದೆ.

ಕೃಷಿಯನ್ನು ಅಗತ್ಯ ಸೇವೆ ಅಡಿ ಸೇರಿಸಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಕೆಲಸ ಮಾಡಬಹುದು. ಸಗಟು ಖರೀದಿದಾರರು, ರಸಗೊಬ್ಬರ ಮತ್ತು ಕೀಟನಾಶಕ ಅಂಗಡಿಗಳು ಮತ್ತು ಬೀಜ ಮಾರುಕಟ್ಟೆಗಳು ಕಾರ್ಯನಿರ್ವಹಿಸಬಹುದು.