ಹಿರಿಯೂರು : ಅಖಿಲ ಭಾರತ ಮಟ್ಟದ ಕಿರಿಯ ಸಂಶೋಧನಾ ಫೆಲೋಷಿಪ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆಯಲ್ಲಿ ಬಬ್ಬೂರು ಫಾರಂನ ತೋಟಗಾರಿಕೆ ಕಾಲೇಜಿನ ವಿದ್ಯಾರ್ಥಿ ಎಚ್.ಎನ್.ನಿಕಿಲ್ ಅವರು ಪ್ರಥಮ ರ್‍ಯಾಂಕ್ ಗಳಿಸಿರುವುದಕ್ಕೆ ಹಾಗೂ ಹಿರಿಯೂರಿನ ತೋಟಗಾರಿಕೆ ಕಾಲೇಜು ದೇಶದಲ್ಲೇ ಪ್ರಥಮ ಸ್ಥಾನ ಪಡೆದಿರುವುದಕ್ಕೆ ಹಿರಿಯೂರು ತೋಟಗಾರಿಕೆ ಕಾಲೇಜಿನ ಸಂಸ್ಥಾಪಕ, ಕೃಷಿ ವಿಜ್ಞಾನಿ ಡಾ|| ಬಿ.ಮಹಂತೇಶ್ ಅಭಿನಂದನೆ ಸಲ್ಲಿಸಿದ್ದಾರೆ.