ಚಿತ್ರದುರ್ಗ : ನಗರದ ಎಸ್.ಜೆ.ಎಂ. ಮಹಿಳಾ ಮಹಾವಿದ್ಯಾಲಯದ ಅಂತಿಮ ಬಿ.ಎ. ವಿದ್ಯಾರ್ಥಿನಿ ಕು| ನಾಗಶ್ರೀ ಬಿ. ಇವರು ಬಿ.ಪರಮೇಶ್ವರಪ್ಪ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಹೊಳಲ್ಕೆರೆ ಇವರು ನಡೆಸಿದ ರಾಜ್ಯಮಟ್ಟದ ಅಂತರಕಾಲೇಜು ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಮತ್ತು ಜನಪದ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ. ಬಹುಮಾನ ವಿಜೇತ ವಿದ್ಯಾರ್ಥಿನಿಗೆ ಕಾಲೇಜಿನ ಪ್ರಾಚಾರ್ಯರು, ಬೋಧಕ ಮತ್ತು ಬೋಧಕೇತರ ವರ್ಗವರು ಅಭಿನಂದಿಸಿದ್ದಾರೆ.