ಚಿತ್ರದುರ್ಗ: ನಗರದ ವೆಂಕಟೇಶ್ವರ ಬಿಇಡಿ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಜಿ.ಇ ಭೈರಸಿದ್ಧಪ್ಪ ಅವರಿಗೆ ದಾವಣಗೆರೆ ವಿಶ್ವ ವಿದ್ಯಾನಿಲಯ ಶಿಕ್ಷಣ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ನೀಡಿದೆ. ದಾವಣಗೆರೆ ಎಂ.ಎಂ ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಡಾ. ಹೆಚ್.ವಿ ವಾಮದೇವಪ್ಪ ಅವರ ಮಾರ್ಗದರ್ಶನದಲ್ಲಿ ’ಕಸ್ತೂರ ಬಾ ಗಾಂಧಿ ಬಾಲಿಕಾ ವಸತಿ ವಿದ್ಯಾಲಯಗಳ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಧನೆಯ ಮೇಲೆ ಪ್ರಭಾವ ಬೀರುವ ಅಂಶಗಳು’ ಎಂಬ ವಿಷಯ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಲಭಿಸಿದೆ.

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ, ಸಂಸ್ಥೆ ಸಿಇಒ ಎಂ.ಸಿ ರಘುಚಂದನ್ ಮತ್ತು ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.