ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹಿರೇನಂದಿಹಾಳ ಗ್ರಾಮದ ಮಹಾಂತೇಶ.ಅಂ.ದುರಗಣ್ಣವರ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ.

ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಮಂಜುನಾಥ ಬೇವಿನಕಟ್ಟಿ ಅವರ ಮಾರ್ಗದರ್ಶನದಲ್ಲಿ “ಚಂದಾಲಿಂಗೇಶ್ವರ ಸಾಂಸ್ಕೃತಿಕ ಸಂಕಥನ” ಎಂಬ ವಿಷಯದ ಮೇಲೆ ಸಂಶೋಧನೆ ಕೈಗೊಂಡು ಅಧ್ಯಯನ ಪೂರ್ಣಗೊಳಿಸಿ ವಿಶ್ವವಿದ್ಯಾಲಯಕ್ಕೆ ಮಹಾಪ್ರಬಂಧವನ್ನು ಸಲ್ಲಸಿ ಡಾಕ್ಟರೇಟ್ ಪದವಿಯನ್ನು ಪಡೆದಿರುತ್ತಾರೆ.