ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮದ ರಾಮಣ್ಣ ಶಿ.ನಾಯಕ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ.

ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಮಂಜುನಾಥ ಬೇವಿನಕಟ್ಟಿ ಅವರ ಮಾರ್ಗದರ್ಶನದಲ್ಲಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹರಪನಹಳ್ಳಿ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಬಸವರಾಜ ಎ.ಡಿ.ಅವರ ಸಹ ಮಾರ್ಗದರ್ಶನದಲ್ಲಿ”ಬೇಡ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳು “(ಕುಕನೂರು ಹೋಬಳಿಯನ್ನು ಅನುಲಕ್ಷಿಸಿ) ಎಂಬ ವಿಷಯದ ಮೇಲೆ ಸಂಶೋಧನೆ ಕೈಗೊಂಡು ಅಧ್ಯಯನ ಪೂರ್ಣಗೊಳಿಸಿ ವಿಶ್ವವಿದ್ಯಾಲಯಕ್ಕೆ ಮಹಾಪ್ರಬಂಧವನ್ನು ಸಲ್ಲಿಸಿ ಡಾಕ್ಟರೇಟ್ ಪದವಿಯನ್ನು ಪಡೆದಿರುತ್ತಾರೆ.