ಬಾಗಲಕೋಟೆ ಜಿಲ್ಲೆಯ  ಬೇವೂರ ಗ್ರಾಮದ ಹಂಚಿನಾಳ ಸಂಗಪ್ಪ, ಬ. ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ.

ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಮಂಜುನಾಥ ಬೇವಿನಕಟ್ಟಿ ಅವರ ಮಾರ್ಗದರ್ಶನದಲ್ಲಿ “ಶ್ರೀ ಕೃಷ್ಣ ಪಾರಿಜಾತದಲ್ಲಿ ಪಾಂಚಾಳರ ಪ್ರಾತಿನಿಧ್ಯ: ತಾತ್ವಿಕ ವಿವೇಚನೆ”ಎಂಬ ವಿಷಯದ ಮೇಲೆ ಸಂಶೋಧನೆ ಕೈಗೊಂಡು ಅಧ್ಯಯನ ಪೂರ್ಣಗೊಳಿಸಿ ವಿಶ್ವವಿದ್ಯಾಲಯಕ್ಕೆ ಮಹಾಪ್ರಬಂಧವನ್ನು ಸಲ್ಲಿಸಿ ಡಾಕ್ಟರೇಟ್ ಪದವಿಯನ್ನು ಪಡೆದಿರುತ್ತಾರೆ.