ಪ್ರಮುಖ ಸುದ್ದಿ

ನೀವು ಮೆಟ್ರೋ ಪ್ರಯಾಣಿಕರ ಹಾಗಾದರೆ ಸುದ್ದಿ ಓದಿ.!

ಬೆಂಗಳೂರು: ವಿಸ್ತರಿಸಿದ ಮಾರ್ಗದಲ್ಲಿ ವಾಣಿಜ್ಯ ಸಂಚಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವುದರಿಂದ ಅಕ್ಟೋಬರ್ 1 ರಂದು ಆರ್.ವಿ ರಸ್ತೆ ಮತ್ತು ಯಲಚೇನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೊ ರೈಲು ಸಂಚಾರ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಹೇಳಿದೆ. ಅಂದು ಬೆಳಿಗ್ಗೆ 7ರಿಂದ ನಾಗಸಂದ್ರದಿಂದ ಆರ್.ವಿ ರಸ್ತೆ ನಿಲ್ದಾಣದವರೆಗೆ ಮಾತ್ರ ಸೇವೆ ಇರಲಿದೆ. ಅ.2 ರಂದು ಬೆಳಿಗ್ಗೆ 7 ರಿಂದ ಎಂದಿನಂತೆ ರೈಲುಗಳು ಸಂಚರಿಸಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಹೇಳಿದೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಮಹತ್ವದ ತೀರ್ಪು: ಎಲ್ಲ ಆರೋಪಿಗಳು ನಿರ್ದೋಷಿ.!

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಲಖನೌದ ಸಿಬಿಐ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪನ್ನು ನೀಡಿದೆ. ಬಿಜೆಪಿ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ ಜೋಶಿ ಹಾಗೂ ಉಮಾ ಭಾರತಿ ಸೇರಿದಂತೆ ಎಲ್ಲ ಆರೋಪಿಗಳು ನಿರ್ದೋಷಿಗಳು ಎಂದು ನ್ಯಾ.ಎಸ್.ಕೆ.ಯಾದವ್ ಅವರು ‌ತೀರ್ಪು ನೀಡಿದ್ದಾರೆ. ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತವಲ್ಲ. ಇದು ಆಕಸ್ಮಿಕ ಘಟನೆ. ಆರೋಪಿಗಳ ವಿರುದ್ಧ ಯಾವುದೇ ಪ್ರಬಲ ಸಾಕ್ಷಿಗಳು ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ಕೊರೋನಾ ಸೋಂಕು ಹಿನ್ನೆಲೆ: ನ.29ರವರೆಗೆ ನ್ಯಾಯಲಯಕ್ಕೆ ರಜೆ.!

ಬೆಂಗಳೂರು; ದಿನದಿಂದ ದಿನಕ್ಕೆ ಕೊರೋನಾ ಕಾಟ ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ನ.29ರವರೆಗೆ ನಿಯಮಗಳ ಅನ್ವಯ ರಜೆ ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೊರೋನಾ ಹಾವಳಿಯಿಂದ ಕಕ್ಷಿದಾರರು ನ್ಯಾಯಾಲಯಕ್ಕೆ ತೆರಳಲು ಕಷ್ಟವಾಗುತ್ತಿರುವ ಹಿನ್ನೆಲೆ ಹೈಕೋರ್ಟ್ ಈ ಆದೇಶ ಹೊರಡಿಸಿದ್ದು, ಇದು ಕಲಬುರಗಿ ಹಾಗೂ ಧಾರವಾಡ ಪೀಠ, ಎಲ್ಲಾ ಜಿಲ್ಲಾ ನ್ಯಾಯಾಲಯಗಳು, ವಿಚಾರಣಾ, ಕೌಟುಂಬಿಕ, ಕಾರ್ಮಿಕ ನ್ಯಾಯಾಲಯಗಳು ಮತ್ತು ಕೈಗಾರಿಕಾ ನ್ಯಾಯಾಧೀಕರಣಗಳಿಗೆ ಅನ್ವಯವಾಗಲಿದೆ ಎಂದು ಹೇಳಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ 10 ಜಿಲ್ಲೆಗಳಲ್ಲಿ ಭಾರಿ ಮಳೆ.!

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದೆ. ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಾಸ್ಕ್ ಹಾಕಿಲ್ಲ ಅಂದ್ರೆ ದಂಡ ಕಟ್ಟುವುದು ಗ್ಯಾರಂಟಿ.! ದಂಡ ಎಷ್ಟು ಗೊತ್ತಾ.!

ಬೆಂಗಳೂರು : ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮಾಡದೆ ನಿರ್ಲಕ್ಷ್ಯ ತೋರುತ್ತಿರುವವರ ವಿರುದ್ಧ ಸರಕಾರ ದಂಡ ಪ್ರಯೋಗಕ್ಕೆ ಮುಂದಾಗಿದೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ಮೊದಲ ಸಲ 1000 ರೂ. ದಂಡ, 3 ನೇ ಬಾರಿ ಸಿಕ್ಕಿಬಿದ್ದರೆ 1000 ರೂ. ದಂಡದ ಜೊತೆಗೆ 1 ವರ್ಷ ಜೈಲು ಶಿಕ್ಷೆ ವಿಧಿಸುವಂತಹ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಚರ್ಚಿಸಲಿದ್ದು, ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಹಾಗಾಗಿ ಮಾಸ್ಕ್ ಧರಿಸಿ ದಂಡದಿಂದ ತಪ್ಪಿಸಿಕೊಳ್ಳಿ

ನಾಳೆಯಿಂದ ಈ ಬದಲಾವಣೆಗಳು ಸಹಜ.!

ನವದೆಹಲಿ: ಅಕ್ಟೋಬರ್ 1ರಿಂದ ದೇಶದಲ್ಲಿ ಅನೇಕ ಬದಲಾವಣೆಗಳು ಸಂಭವಿಸಲಿವೆ. ಕೇಂದ್ರ ಸರ್ಕಾರದ ಅನ್‌ಲಾಕ್ 5.0 ಮಾರ್ಗಸೂಚಿ ಅಂದಿನಿಂದಲೇ ಜಾರಿಗೆ ಬರಲಿದೆ. ದೇಶಾದ್ಯಂತ ಏಕರೂಪದ ವಾಹನ ಚಾಲನಾ ಪರವಾನಗಿ (ಡಿಎಲ್) ಮತ್ತು ನೋಂದಣಿ ಪ್ರಮಾಣ ಪತ್ರಗಳನ್ನು (ಆರ್‌ಸಿ) ಅ.1ರಿಂದಲೇ ಸರ್ಕಾರ ವಿತರಣೆ ಮಾಡಲಿದೆ. ಅಲ್ಲದೆ, ಚಾಲನೆ ಮಾಡುವಾಗ ಮೊಬೈಲ್ ಬಳಕೆ ಮಾಡಿದರೆ ದಂಡ ವಿಧಿಸುವ ನಿಯಮ ಕೂಡ ಜಾರಿಗೆ ಬರಲಿದೆ. ಇನ್ನು, ಸಿಹಿತಿಂಡಿಗಳ ಪ್ಯಾಕ್ ಗಳ ಮೇಲೆ ಮುಕ್ತಾಯ ದಿನಾಂಕವನ್ನು ನಮೂದಿಸಬೇಕಿರುವ ನಿಯಮ ಸಹ ಜಾರಿಯಾಗಲಿದೆ.

ಅಕ್ಟೋಬರ್ 28ರಂದು ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಚುನಾವಣಾ ಆಯೋಗ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 1 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಅ.8ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರ ಪರಿಶೀಲನೆ ಅ.9, ನಾಮಪತ್ರ ಹಿಂದಕ್ಕೆ ಪಡೆಯಲು ಅ.12ರಂದು ಕೊನೆಯ ದಿನವಾಗಿದೆ. ನವೆಂಬರ್ 2 ರಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಾದ ಆಗ್ನೇಯ ಪದವೀಧರರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

2 ಕ್ಷೇತ್ರಗಳ ಉಪ ಚುನಾವಣೆಗೆ ಮಹೂರ್ತ ಫಿಕ್ಸ್

ಬೆಂಗಳೂರು ; ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಬೆಂಗಳೂರಿನ ಆರ್.ಆರ್. ನಗರ ಹಾಗೂ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಮುಂಬರುವ ನ.3ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಘೋಷಣೆ ಮಾಡಿದೆ. ಅ.9 ಚುನಾವಣೆ ಅಧಿಸೂಚನೆ ಪ್ರಕಟ, ಅ.16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ, ಅ.19 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ನ.10ರಂದು ಫಲಿತಾಂಶ ಹೊರಬೀಳಲಿದೆ.

ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ: ಬಿಎಸ್ ಯಡಿಯೂರಪ್ಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯದ ಜನಸಂಖ್ಯೆ ಗಣನೀಯವಾಗಿದ್ದು, ಕಾಡುಗೊಲ್ಲ ಸಮುದಾಯದ ಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಮಾಜದ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ನಿಗಮ ಸ್ಥಾಪಿಸುವ ಅಗತ್ಯತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಆದೇಶಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

TET ಪರೀಕ್ಷೆ ಬರೆಯುವವರ ಗಮನಕ್ಕೆ.!

ಬೆಂಗಳೂರು : ಟಿಇಟಿ ಪರೀಕ್ಷಾ ಕೇಂದ್ರ ಬದಲಾಯಿಸಿಕೊಳ್ಳಲು ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದ್ದು, ಕೊರೊನಾ ಕಾರಣದಿಂದಾಗಿ ತಮ್ಮ ಮೂಲ ಜಿಲ್ಲೆಗಳಿಗೆ ಹಿಂತಿರುಗಿರುವ ವಲಸಿಗರು, ಗರ್ಭಿಣಿಯರು, ಪ್ರವಾಹ ಮುಂತಾದ ಕಾರಣಗಳಿಂದಾಗಿ ಕೆಲವು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಬದಲಾವಣೆ ಬಯಸುವವರು ಅ. 2 ರ ರಾತ್ರಿ 12 ಗಂಟೆಯ ಒಳಗೆ ತಮ್ಮ ಮನವಿಯನ್ನು ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಅಕ್ಟೋಬರ್ 4 ರಂದು ನಡೆಯುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( ಟಿಇಟಿ) ನಡೆಯಲಿದ್ದು, ಒಟ್ಟು 604 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.  ಈ ಬಾರಿ ಪತ್ರಿಕೆ-1 ಕ್ಕೆ 74,977 ಮತ್ತು ಪತ್ರಿಕೆ -2 ಕ್ಕೆ 1,69,71 ಸೇರಿ