ಪ್ರಮುಖ ಸುದ್ದಿ

ಬಳ್ಳಾರಿಯಿಂದ ಶುರುವಾಗುತ್ತೆ ಆಪರೇಷನ್ ಕಮಲ: ಈಶ್ವರಪ್ಪ.!

ಬಳ್ಳಾರಿ: ನಾವೇನಾದರೂ ಆಪರೇಷನ್ ಕಮಲಕ್ಕೆ ಮುಂದಾದರೆ ಅದು ಬಳ್ಳಾರಿಯಿಂದಲೇ ಪ್ರಾರಂಭವಾಗುತ್ತದೆ ಎಂದು ಬಿಜೆಪಿ ನಾಯಕ ಕೆ.ಎಸ್​.ಈಶ್ವರಪ್ಪ ಹೇಳಿದ್ದಾರೆ. ಆಪರೇಷನ್ ಕಮಲದ ಬಗ್ಗೆ ಮಾತನಾಡಿ, ಮೈತ್ರಿ ಸರ್ಕಾರದ ಆಡಳಿತಕ್ಕೆ ಜನ ಬೇಸತ್ತಿದ್ದಾರೆ. ಈ ದೋಸ್ತಿ ಸಾಕಷ್ಟು ಅಕ್ರಮ ನಡೆಸಿದೆ. ಇದರಿಂದಾಗಿ “ಕೈ”-ದಳದಲ್ಲಿ ಹೊಂದಾಣಿಕೆಯಿಲ್ಲ. ಈ ಕಾರಣದಿಂದ ಅಲ್ಲಿನ ಶಾಸಕರೇ ನಮ್ಮನ್ನು ಸಂಪರ್ಕಿಸಿದ್ದಾರೆ. ಆಪರೇಷನ್ ಕಮಲ ಶುರುವಾದರೆ ಅದು ಬಳ್ಳಾರಿಯಿಂದಲೇ ಎಂದು ಈಶ್ವರಪ್ಪ ಹೇಳಿರುವ ಮಾತಿಗೆ ಕಾಂಗ್ರೆಸ್-ದಳದಲ್ಲಿ ನಡುಕ ಶುರುವಾಗಿದೆ ಎಂಬುದು ರಾಜಕೀಯ ಲೆಕ್ಕಾಚಾರದವರ ಮಾತು.!

ನಟಿ ಹರ್ಷಿತ ಪೂಣಚ್ಚ ಹೇಳಿಕೆ: ಸಾ.ರ.ಮಹೇಶ್ ಹೇಳಿದ್ದು ಹೀಗೆ.!

ಮೈಸೂರು: ಕೊಡಗು ಸಂತ್ರಸ್ತರ ಮನೆಗಳ ಗುಣಮಟ್ಟದ ಕುರಿತು ಆಕ್ಷೇಪಿಸಿದ್ದ ನಟಿ ಹರ್ಷಿಕಾ ಪೂಣಚ್ಚ ಅವರ ಹೇಳಿಕೆಗೆ ಸಚಿವ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ. ಹರ್ಷಿಕಾ ಪೂರ್ಣಚ್ಚ ಯಾರು? ಈಗ ಏನಾಗಿದ್ದಾರೆ. ಅವರು ಸಿನಿಮಾದವರು ಆ ಬಗ್ಗೆ ಮಾತನಾಡಲಿ. ಕೊಡಗು ಸಂತ್ರಸ್ತರ ಮನೆಗಳ ಕುರಿತು ಅವರಿಗೇನು ಗೊತ್ತಿದೆ. ವಾಸ್ತವ ತಿಳಿಯದೆ ಮಾತನಾಡುವುದು ಮೂರ್ಖತನ. ಕೊಡಗಿನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಕೆಲವರಿಗೆ ಪ್ರಚಾರದ ಗೀಳು ಅಂಟಿಕೊಂಡಿದೆ ಎಂದು ಹೇಳಿದರು.

ಸಿಡಿಲು ಬಂದಾಗ ನಮ್ಮನ್ನ ನಾವು ಹೇಗೆ ರಕ್ಷಣೆ ಮಾಡಿಕೊಳ್ಳ ಬೇಕು.?

ಬೆಂಗಳೂರು: ಗುಡುಗು–ಮಿಂಚು ಬರಲಿದೆ ಎಂದು ಗೊತ್ತಾದಾಗ ನೀವು ಬಯಲಿನಲ್ಲಿದ್ದರೆ. ತಕ್ಷಣವೇ ಇರುವುದರಲ್ಲಿ ತಗ್ಗು ಪ್ರದೇಶಕ್ಕೆ ಹೋಗಿ ಕುಳಿತುಕೊಳ್ಳಿ.ನಿಲ್ಲ ಬೇಡಿ ತಗ್ಗು ಪ್ರದೇಶ ಇಲ್ಲದೆ ಬಯಲಿನಲ್ಲೆ ಇರಬೇಕಾದರೆ. ನಿಮ್ಮ ತಲೆಯನ್ನು ಮೊಣಕಾಲುಗಳ ನಡುವೆ ಹುದುಗಿಸಿಕೊಳ್ಳಿ, ಇದು ಮಿಂಚಿನಿಂದ ಮೆದುಳಿಗೂ,ಹೃದಯಕ್ಕೂ ಆಗುವ ಹಾನಿಯನ್ನು ತಪ್ಪಿಸುತ್ತದೆ. ಮರಗಳಿದ್ದ ಪ್ರದೇಶದಲ್ಲಿ ನೀವು ಇದ್ದರೆ, ಅಲ್ಲಿಂದ ಬೇಗನೆ ಹೊರಬರುವುದು ಒಳ್ಳೆಯದು.(ಯಾಕೆಂದರೆ ಸಿಡಿಲು ಮೋಡದಿಂದ ಭೂಮಿಗೆ ಹರಿಯಲು ಮರದಂತಹ ಹಸಿ, ಒದ್ದೆ ವಸ್ತುವನ್ನೇ ಆರಿಸಿಕೊಳ್ಳುತ್ತದೆ.) ಎತ್ತರದ ಗುಡ್ಡದ ಮೇಲಿದ್ದರೆ ತಗ್ಗಿಗೆ ಇಳಿರಿ.ಕುರಿ ಮಂದೆ ಅಥವಾ ಜಾನುವಾರುಗಳ ಮಧ್ಯ ನಿಂತಿದ್ದರೆ, ಅವುಗಳ ಮಧ್ಯದಲ್ಲಿ ಬಗ್ಗಿ ಕುಳಿತುಕೊಳ್ಳಿ, ( ಯಾಕೆಂದರೆ ಮಿಂಚು ಪ್ರಾಣಿಗಳಿಗಿಂತ ಎತ್ತರವಿರುವ ಮನುಷನನ್ನೇ ಆರಿಸಿಕೊಳ್ಳುತ್ತದೆ.) ಕೆರೆಯಲ್ಲಿ ಈಜುವುದು,ಸ್ನಾನ

ಸುಳ್ಳು ಸುದ್ದಿ ಹರಡುವವರಿಗೆ ವಾಟ್ಸಾಪ್ ನೀಡಿದೆ ಶಾಕ್!

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ, ಸುಳ್ಳು ಸುದ್ದಿ ಹರಡುತ್ತಿವೆ. ಇಂತಹ ಕೃತ್ಯಕ್ಕೆ ಕಡಿವಾಣ ಹಾಕಲು ವಾಟ್ಸಾಪ್ ಮುಂದಾಗಿದೆ. ವಾಟ್ಸಾಪ್ ಮೂಲಕ ಪ್ರಚೋದನಕಾರಿ ಸಂದೇಶ, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮಕ್ಕೆ ನಿರ್ಧರಿಸಲಾಗಿದೆ. ಅಲ್ಲದೆ ಕೃತ್ಯದಲ್ಲಿ ಭಾಗಿಯಾದವರು ನ್ಯಾಯಾಲಯದಲ್ಲಿ ಮೊಕದ್ದಮೆ ಎದುರಿಸಲಿದ್ದಾರೆ. ಸಂಸ್ಥೆಯ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಪ್ರಚೋದನಾಕಾರಿ ಸಂದೇಶ, ಸುಳ್ಳು ಸುದ್ದಿ ಬಿತ್ತರಿಸುವವರ ವಿರುದ್ಧ ಕ್ರಮಕೈಗೊಳ್ಳುವುದು ಸುಲಭವಾಗಲಿದೆ.  

ಬಿಜೆಪಿ ಅಹೋರಾತ್ರಿ ಹೋರಾಟಕ್ಕೆ ಸಿಎಂ ಟ್ವೀಟ್ ಏನು.?

ಬೆಂಗಳೂರು: ಬಿಜೆಪಿ ನಾಯಕರ ಅಹೋರಾತ್ರಿ ಪ್ರತಿಭಟನೆಯನ್ನು ಗಮನಿಸಿದ್ದೇನೆ. ಸಿಎಂ ಕಚೇರಿಗೆ ಮುತ್ತಿಗೆಯ ಅವಶ್ಯಕತೆಯಿಲ್ಲ. ಜಿಂದಾಲ್ ಹಾಗೂ ಬರ ಮತ್ತು ರೈತರ ಸಾಲಮನ್ನಾ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ದನಿದ್ದೇನೆ. ಪ್ರಧಾನಿ ಸೇರಿದಂತೆ ಕೇಂದ್ರದ ಸಚಿವರೊಂದಿಗೆ ಹಲವು ಸಮಸ್ಯೆ ಕುರಿತು ಚರ್ಚಿಸಿದ್ದೇನೆ. ನಿಮ್ಮ ಸಮಯ ತಿಳಿಸಿ ಚರ್ಚೆಗೆ ನಾನು ಸಿದ್ದ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ತೋಟಗಾರಿಕೆ : ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನಲ್ಲಿ 2019-20 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳಿಗೆ “ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ“ ಜಾರಿಗೊಳಿಸಿದ್ದು, ವಿಮೆಗೆ ನೊಂದಣಿ ಮಾಡಿಸಲು ಜೂ. 30 ಕೊನೆಯ ದಿನವಾಗಿದೆ. ಚಿತ್ರದುರ್ಗ ತಾಲ್ಲೂಕಿಗೆ ಮಾವು, ದಾಳಿಂಬೆ, ಅಡಿಕೆ ಬೆಳೆಗಳನ್ನು ವಿಮೆಗೆ ನಿಗದಿಪಡಿಸಿದೆ. ಈ ಬೆಳೆಗಳಿಗೆ ವಿಮೆಗಾಗಿ ನೊಂದಾಯಿಸಲು ಜೂನ್ 30 ಕೊನೆಯ ದಿನವಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ಚಿತ್ರದುರ್ಗ ತಾಲ್ಲೂಕಿನ ಕಸಬಾ ಹೋಬಳಿಗೆ ಈರುಳ್ಳಿ ನೀರಾವರಿ, ಮಳೆಯಾಶ್ರಿತ. ಹಿರೇಗುಂಟನೂರು ಹೋಬಳಿಗೆ ಈರುಳ್ಳಿ ನೀರಾವರಿ, ಮಳೆಯಾಶ್ರಿತ, ಭರಮಸಾಗರ ಹೋಬಳಿಗೆ ಈರುಳ್ಳಿ, ಟೊಮೆಟೋ. ತುರುವನೂರು ಹೋಬಳಿಗೆ ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ

ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ.?!

  ಬೆಂಗಳೂರು: ಈಚೆಗೆ ನಡೆದ ಲೋಕ ಸಮರದ ಸೋಲಿನ ನೈತಿಕ ಹೊಣೆಹೊತ್ತ ದಿನೇಶ್, ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರವಾನಿಸಿದ್ದಾರಂತೆ.! 2018 ಜು.4ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸಚಿವ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್ ನಡುವೆ​ ಪೈಪೋಟಿ ಇದೆ. ಆದರೆ “ಕೈ’ ಕಮಾಂಡ್ ಒಪ್ಪುತ್ತದೋ ಎಂಬುದು ಇನ್ನು ಕಾದು ನೋಡಬೇಕಿದೆ.!

ಬಿಪಿಎಲ್ ( ಆರ್) ಎಪಿಎಲ್ ಪಡಿತರ ಚೀಟಿದಾರರೆ.?

ಬೆಂಗಳೂರು: ರೇಷನ್ ಕಾರ್ಡ್ ಅನ್ನು ಜುಲೈ 31ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ಪಡಿತರ ಸಿಗಲ್ಲ. ಬಿಪಿಎಲ್, ಎಪಿಎಲ್, ಅಂತ್ಯೋದಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿದ ಎಲ್ಲರೂ ಜು.31ರೊಳಗೆ ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸುವಂತೆ ಆಹಾರ ನಾಗರಿಕ ಸರಬರಾಜು&ಗ್ರಾಹಕರ ವ್ಯವಹಾರಗಳ ಇಲಾಖೆ ಸುತ್ತೋಲೆ ಹೊರಡಿಸಿದೆ. ತಾವು ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ ದೃಢೀಕರಣದೊಂದಿಗೆ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ಮಾಡದಿದ್ದರೆ ಪಡಿತರ ಹಂಚಿಕೆ ಸ್ಥಗಿತವಾಗಲಿದೆ.! (ಸಾಂದರ್ಭಿಕ ಚಿತ್ರ)

ವಾರಕ್ಕೊಂದು ರಜೆ, ಸಾಮಾಜಿಕ ಭದ್ರತೆಗೆ ಆಗ್ರಹಿಸಿ ಪ್ರತಿಭಟನೆ

ಚಿತ್ರದುರ್ಗ: ವಾರಕ್ಕೊಂದು ರಜೆ, ಸಾಮಾಜಿಕ ಭದ್ರತೆ ಸೇರಿದಂತೆ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಮನೆ ಕೆಲಸ ಮಾಡುವ ನೂರಾರು ಮಹಿಳೆಯರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ ಹಾಗೂ ಕೊನ್ ಫೆಡರೇಶನ್ ಆಫ್ ಫ್ರೀ ಟ್ರೇಡ್ ಯೂನಿಯನ್ಸ್ ಆಫ್ ಇಂಡಿಯಾ ನೇತೃತ್ವದಲ್ಲಿ ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕಿನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಮನೆ ಕೆಲಸ ಮಾಡುವ ಮಹಿಳೆಯರಲ್ಲಿ ಕೆಲವರು ಡೊಳ್ಳು ಬಾರಿಸಿದರೆ ಇನ್ನು ಕೆಲವರು ಭಜನೆ ಮಾಡುವ ಮೂಲಕ ತಮ್ಮ ಸಮಸ್ಯೆಗಳನ್ನು ಜಿಲ್ಲಾಡಳಿತಕ್ಕೆ ತೋಡಿಕೊಂಡರು. ಹತ್ತಾರು ವರ್ಷಗಳಿಂದಲೂ ಮನೆ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಇಂದಿಗೂ ಜೀವನ

ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೊಂದು ಗುಡ್ ನ್ಯೂಸ್..!

  ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ 311 ಕೋಟಿ ರೂ. ವೆಚ್ಚದಲ್ಲಿ ಉಚಿತ ಲ್ಯಾಪ್ ಟ್ಯಾಪ್ ವಿತರಣೆಗೆ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಲ್ಯಾಪ್ ಟಾಪ್ ಕೊಡುವ ಬಗ್ಗೆ ಈ ಹಿಂದೆ ಘೋಷಣೆಯಾಗಿತ್ತು. ಆದರೆ ನಾನಾ ಕಾರಣಗಳಿಂದ ಈ ಯೋಜನೆ ವಿಳಂಬವಾಗಿತ್ತು, ಆದರೆ ಸಚಿವ ಸಂಪುಟ ಸಭೆ ಇದಕ್ಕೆ ಒಪ್ಪಿಗೆ ನೀಡಿದೆ ಹಾಗಾಗಿ ಸುಮಾರು 311 ಕೋಟಿ ವೆಚ್ಚದಲ್ಲಿ 1 ಲಕ್ಷ 9 ಸಾವಿರ 916 ಮಕ್ಕಳಿಗೆ ಸರ್ಕಾರದ ವತಿಯಿಂದಲೇ ಮಕ್ಕಳಿಗೆ ಲ್ಯಾಪ್ ಟಾಪ್ ನೀಡುವ ವಿಚಾರಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಈಗಾಗಲೇ ಟೆಂಡರ್ ಕೂಡ ಕರೆಯಲಾಗಿದೆ.