ತುಮಕೂರು: ಅಪರಿಚಿತ ವಾಹನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. 

 ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಗಿರೀಶ್(23), ಯೋಗೀಶ್(25) ಹಾಗೂ ಪ್ರವೀಣ್(24) ಎಂದು ತಿಳಿದುಬಂದಿದೆ.

 ಕಾರಿನಲ್ಲಿದ್ದ ಇನ್ನೊಬ್ಬ ಯುವಕ ಗಾಯಗೊಂಡಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಈ ದುರ್ಘಟನೆ ಸಂಬಂಧ ಪ್ರಕರಣ ದಾಖಲಿಸಿ ತಿಪಟೂರು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.