ಚಿತ್ರದುರ್ಗ:  ಎಡಿಜಿಪಿ ಕಾರಿಗೆ ಲಾರಿ ಡಿಕ್ಕಿಯಾದ ಘಟನೆ ಚಿತ್ರದುರ್ಗ ತಾಲ್ಲೂಕಿನ ಕೊಳಹಾಳ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.

ಬೆಂಗಳೂರಿನ ಡಿ ಸಿ ಆರ್ ಇ ಘಟಕದ ಎಡಿಜಿಪಿ ಕೆ.ರಾಮಚಂದ್ರ ರಾವ್ ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಹೋಗುವಾಗ ಹಿಂಬದಿಯಲ್ಲಿ ವೇಗವಾಗಿ ಬಂದ ಲಾರಿಯೊಂದು ಕಾರಿಗೆ ಡಿಕ್ಕಿಹೊಡೆದಿದ್ದು,  ಅಪಘಾತದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.