ಬೆಳಗಾವಿ: ಬೈಕ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿ ಆಗಿ ಬೈಕ್ ನಲ್ಲಿದ್ದ ತಾಯಿ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದಕವಿ ಗ್ರಾಮದ ಬಳಿ ನಡೆದಿದೆ.

ಮೃತರು ತಾಯಿ ಸುಜಾತಾ ಕಣವಿ, ಮಗು ಪ್ರೀತಮ್ ಮೃತ ಎಂದು ತಿಳಿದುಬಂದಿದೆ. ಸ್ಥಳಕ್ಕೆ  ರಾಮದುರ್ಗ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.