ದಾವಣಗೆರೆ; ಬಸ್ ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತರು ಹೊನ್ನಾಳಿ ತಾಲೂಕಿನ ಹರಳಹಳ್ಳಿ ಗ್ರಾಮದವರಾದ ರಮೇಶ್(40), ಉಷಾ(25), ಚಂದ್ರು(3) ಹಾಗೂ ಕಾರು ಚಾಲಕ ಎಂದು ತಿಳಿದುಬಂದಿದೆ.

ಕಾರು ಶಿವಮೊಗ್ಗದಿಂದ ದಾವಣಗೆರೆಗೆ ಬರುತ್ತಿದ್ದಾಗ ಕಾರಿನ ಟಯರ್‌ ಸ್ಫೋಟಗೊಂಡು ಡಿಕ್ಕಿ ಹೊಡೆದ ರಭಸಕ್ಕೆ ಎರಡು ಬೈಕ್ ಗಳು ಜಖಂಗೊಂಡಿವೆ. ಈ ಸಂಬಂಧ ಹೊನ್ನಾಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.