ಚಿತ್ರದುರ್ಗ:  ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಒಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.

ಸೂರತ್ ಮೂಲದ 30ವರ್ಷದ ಅರುಣ್ ಹಾಗೂ ಬೆಂಗಳೂರು ಮೂಲದ ಶಶಿಕುಮಾರ್ 32 ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ಬದಿ ನಿಂತಿದ್ದ ಸರಕು ಲಾರಿಗೆ ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಡಿಕ್ಕಿ ಹೊಡೆದಿದೆ.

ಮೃತರ ಶವವನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದ್ದು, ಮೂರು ಮಂದಿ ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.