ವಿಜಯಪುರ: ಕ್ಯಾಂಟರ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ ಘಟನೆ  ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಸಮೀಪದಲ್ಲಿ ನಡೆದಿದೆ.

ಮೃತರು ಕಲಬುರಗಿ ಜಿಲ್ಲೆಯ ಚಿತ್ತಾಪುರಕ್ಕೆ ಸೇರಿದವರೆಂದು  ಎಂದು ತಿಳಿದುಬಂದಿದೆ..

ಅಪಘಾತದ ತೀವ್ರತೆಗೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಲ್ಲಿ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.