ಬೆಂಗಳೂರು: ನಿಂತಿದ್ದ ಲಾರಿಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಮಿಳುನಾಡಿದ ಹೊಸೂರು ಬಳಿ ಇಂದು ಬಳಗ್ಗೆ ನಡೆದಿದೆ. 

ತಿರುಚ್ಚಿಯಿಂದ ಆಂಬ್ಯಲೆನ್ಸ್‌ನಲ್ಲಿ ಇಬ್ಬರು ರೋಗಿಗಳನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿತ್ತು ಎಂದು ತಿಳಿದು ಬಂದಿದೆ.

 ಮೃತರನ್ನು ಆಂಬ್ಯುಲೆನ್ಸ್ ಚಾಲಕ ಜೈಸೂರ್ಯ, ಸಹಾಯಕ ಮದನ್ ಕುಮಾರ್ ಎಂದು ಗುರುತಿಸಲಾಗಿದೆ.ಇಬ್ಬರು ರೋಗಿಗಳು ಸಹ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹೊಸೂರು ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.