ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಮಮತಾ ಬ್ಯಾನರ್ಜಿಯನ್ನು ಬೆಂಬಲಿಸುವವರಿಗೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಕೈ-ಕಾಲು ಮುರಿಯುವ ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದಾರೆ. 

ಹಲ್ದಿಯಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿದೆ, ಇದರ ನಡುವೆ ಮಮತಾ ಬ್ಯಾನರ್ಜಿಯನ್ನು ಬೆಂಬಲಿಸುವವರಿಗೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಕೈ-ಕಾಲು ಮುರಿಯುವ ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ.

ದೀದಿಯನ್ನು ಬೆಂಬಲಿಸುತ್ತಿರುವ ಸಹೋದರರು 6 ತಿಂಗಳಲ್ಲಿ ತಮ್ಮ ನಡೆಯನ್ನು ಬದಲಾವಣೆ ಮಾಡಿಕೊಳ್ಳಬೇಕು ಇಲ್ಲದೆ ಇದ್ದರೆ ಅವರಿಗೆ ಕೈ-ಕಾಲು ಕಳೆದುಕೊಳ್ಳಬೇಕಾಗುತ್ತದೆ. ಹೆಚ್ಚು ಮಾಡಿದರೆ ಪ್ರಾಣವನ್ನೂ ಕಳೆದುಕೊಳ್ಳುವ ಭೀತಿ ಎದುರಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಸಮಾವೇಶವೊಂದರಲ್ಲಿ ಹೇಳಿರುವ ವಿಡೀಯೋ ವೈರಲ್ ಆಗಿದೆ.

ಹಲ್ದಿಯಾದಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿರುವ ದಿಲೀಪ್ ಘೋಷ್, ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.