ಚಿತ್ರದುರ್ಗ: ರಾಜ್ಯದಲ್ಲಿ ಕಳೆದ ನಾಲ್ಕುವರೆ ವರ್ಷಗಳಿಂದಲೂ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿದ್ದೇವೆ ಎಂದು ಹೇಳಿಕೊಳ್ಳುತ್ತಿದೆ.

ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ೨೦೧೭-೧೮ ನೇ ಸಾಲಿಗೆ ನೀಡಲಾಗುವ ಉದ್ಯೋಗಿನಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಿರುವ ಅಂಕಿ ಅಂಶಗಳನ್ನು ನೋಡಿದರೆ ತಿಳಿಯುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಷ್ಠರ ಮಟ್ಟಿಗೆ ಬಡವರ ಪರವಾಗಿದ್ದಾರೆ ಎಂಬುದಾಗಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನೇರವಾಗಿ ಆಪಾದಿಸಿದರು.

ಫಲಾನುಭವಿಗಳ ಆಯ್ಕೆಗಾಗಿ ಗುರುವಾರ ಸಂದರ್ಶನ ನಡೆಸುವುದಕ್ಕೂ ಮುನ್ನಾ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು ಚಿತ್ರದುರ್ಗ ವಿಭಾಗದಲ್ಲಿ ೧೬ ಮಂದಿ ಆಯ್ಕೆಗೆ ೩೧೯ ಅರ್ಜಿಗಳು ಬಂದಿವೆ. ಯಾವ ರೀತಿ ಆಯ್ಕೆ ಮಾಡಬೇಕು ಎಂಬುದೇ ಕಷ್ಠವಾಗಿದೆ. ಒಬ್ಬರಿಗೆ ಕೊಟ್ಟರೆ ಮತ್ತೊಬ್ಬರ ಮನಸ್ಸಿಗೆ ನೋವುಂಟಾಗುವುದು ಸಹಜ. ಹಾಗಾಗಿ ಮುಂದಿನ ಸಾಲಿಗೆ ಫಲಾನುಭವಿಗಳ ಸಂಖ್ಯೆಗನುಗುಣವಾಗಿ ಗುರಿಯನ್ನು ಹೆಚ್ಚಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದರು