ಅಲಿಗ : 16 ವರ್ಷದ ಹುಡುಗಿಯನ್ನು ಅಪಹರಿಸಿ ಮಾನಭಂಗ ಎಸಗಿ ಕೊಲೆ ಮಾಡಿದ ದುಷ್ಕರ್ಮಿಗಳು. ಈ ಘಟನೆ ಅಲಿಗದ ಗಾಂಧಿ ಪಾರ್ಕ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

ಹುಡುಗಿ ನಾಪತ್ತೆಯಾದ ಹಿನ್ನಲೆಯಲ್ಲಿ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದಾರೆ. ಆದರೆ ಆಕೆಯನ್ನು ಅಪಹರಿಸಿರುವುದಾಗಿ ಮತ್ತು ಬಿಡುಗಡೆಗೊಳಿಸಲು ೫ಲಕ್ಷ ರೂ ಹಣವನ್ನು ನೀಡಬೇಕೆಂದು ಅಪಹರಣಕಾರರು ಬೇಡಿಕೆ ಇಟ್ಟಿದ್ದಾರೆ.

ಆದರೆ ಹುಡುಗಿಯ ಕುಟುಂಬದವರು ಹಣದ ನೀಡದ ಹಿನ್ನಲೆಯಲ್ಲಿ ಆಕೆಯ ಮೇಲೆ ಸಾಮೂಹಿಕ ಮಾನಭಂಗ ಎಸಗಿ ಆಕೆಯನ್ನು ಹತ್ಯೆ ಮಾಡಿ ರೈಲ್ವೆ ಹಳಿ ಮೇಲೆ ಎಸೆದಿದ್ದಾರೆ. ಶವ ಪೊಲೀಸರ ಕೈಗೆ ಸಿಕ್ಕಿದ್ದು. ಈ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.