ಚಿತ್ರದುರ್ಗ: 2 ಲಾರಿಗಳ ನಡುವೆ ಡಿಕ್ಕಿಯಾಗಿ ಇಬ್ಬರು ಚಾಲಕರೂ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿಯ ಬಳಿ ನಡೆದಿದೆ.

ಮೃತಪಟ್ಟವರನ್ನು ಶಿವರಾಜ್​ (35) ಮತ್ತು ಮಧ್ಯಪ್ರದೇಶದ ಸುರೇಂದ್ರ ಡಾಕಡ್​ (50) ಎಂದು ತಿಳಿದುಬಂದಿದೆ.  ಗಾಯಾಳುಗಳನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ