ಚಿತ್ರದುರ್ಗ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅನ್‍ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಕೆ ಕೊನೆಯ ದಿನವನ್ನು ಮೇ. 30 ರವರೆಗೆ ವಿಸ್ತರಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಭರಮಸಾಗರ, ಚಿತ್ರದುರ್ಗ, ಹೊಳಲ್ಕೆರೆ, ಚಳ್ಳಕೆರೆ, ಹಿರಿಯೂರು, ಹೊಸದುರ್ಗ, ಹಾಗೂ ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 26 ಅಂಗನವಾಡಿ ಕಾರ್ಯಕರ್ತೆ ಹಾಗೂ 66 ಸಹಾಯಕಿಯರ ಹುದ್ದೆಗಳಿಗೆ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೊರೊನ ಸೋಕು ತಡೆಗಟ್ಟು ಹಿನ್ನಲೆಯಲ್ಲಿ ಲಾಕ್‍ಡೌನ್ ವಿಸ್ತರಿಸಲಾಗಿರುವ ಕಾರಣ ಅರ್ಜಿ ಸಲ್ಲಿಕೆ ದಿನಾಂಕವನ್ನು ಮೇ 30ರ ವರೆಗೆ ವಿಸ್ತರಿಸಲಾಗಿದೆ.ಈ ಹಿಂದೆ ಅಧಿಸೊಚನೆಯಲ್ಲಿ ಹೊರಡಿಸಿರುವ ಕ್ಯಾಲೆಂಡರ್ ಆಪ್ ಇವೆಂಟ್ ಅನ್ವಯಿಸುವುದಿಲ್ಲ. ಅನ್‍ಲೈನ್‍ನಲ್ಲಿ ಅರ್ಜಿಸಲ್ಲಿಸಲು ವೆಬ್‍ಸೈಟ್ ವಿಳಾಸ: www.anganwadirecruit.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.