ಚಿತ್ರದುರ್ಗ:   ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿಗಾಗಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಚಿತ್ರದುರ್ಗ ಸಿಡಿಪಿಒ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಕಳೆದ 2020ರ ಮಾರ್ಚ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.  ಇದೀಗ ಆಯ್ಕೆ ಸಮಿತಿಯ ಮೂಲಕ ಅರ್ಜಿಗಳನ್ನು ಪರಿಶೀಲಿಸಿ ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜುಲೈ 6 ರಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಬಾಲಭವನ ಆವರಣ, ಜಿಲ್ಲಾ ಕ್ರೀಡಾಂಗಣ (ಸ್ಟೇಡಿಯಂ) ಹತ್ತಿರ, ಚಿತ್ರದುರ್ಗ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಿಸಿದ ಸೂಕ್ತ ದಾಖಲಾತಿಗಳೊಂದಿಗೆ  ಜುಲೈ 15 ಸಂಜೆ 5.30 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಬಾಲಭವನ ಆವರಣ, ಜಿಲ್ಲಾ ಕ್ರೀಡಾಂಗಣ (ಸ್ಟೇಡಿಯಂ) ಹತ್ತಿರ, ಚಿತ್ರದುರ್ಗ ಇವರಿಗೆ ಸಲ್ಲಿಸಬಹುದಾಗಿದೆ.  ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.