ಚಿತ್ರದುರ್ಗ: ಶ್ರಾವಣ ಆರಂಭದ ಮೊದಲನೆ ಅಮಾವಾಸೆಯಂದು ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮನಿಗೆ ಶನಿವಾರ ವಿಶೇಷವಾಗಿ ಅಲಂಕರಿಸಲಾಗಿತ್ತು.

ಎಲೆ, ನಿಂಬೆಹಣ್ಣು, ವಿವಿಧ ಬಗೆಯ ಹೂವು ಹಾಗೂ ಹಾರಗಳಿಂದ ಕಣಿವೆಮಾರಮ್ಮನನ್ನು ಸಿಂಗರಿಸಿರುವುದನ್ನು ನೂರಾರು ಭಕ್ತರು ಕಣ್ತುಂಬಿಕೊಂಡರು.

ಅಮಾವಾಸೆಯ ಪ್ರಯುಕ್ತ ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.