ಮೈಸೂರು: ಕೇಂದ್ರ ಲೋಕಸೇವಾ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಯು ಅಕ್ಟೋಬರ್ 04 ರಂದು ಭಾನುವಾರ ಮೈಸೂರು ನಗರದ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಪರೀಕಾ ಕ್ರೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಮೈಸೂರು ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಆದೇಶ ಹೊರಡಿಸಿರುತ್ತಾರೆ.
ಮೈಸೂರು ನಗರದ ವಿ.ವಿ.ಮೊಹಲ್ಲಾದಲ್ಲಿರುವ ನಿರ್ಮಲ ಪ್ರೌಢಶಾಲೆ, ಕೃಷ್ಣಮೂರ್ತಿಪುರಂನಲ್ಲಿರುವ ಎಂ.ಎಂ.ಕೆ ಅಂಡ್ ಎಸ್.ಡಿ.ಎಂ ಬಾಲಕಿಯರ ಪಿ.ಯು ಕಾಲೇಜು, ಸೀತಾವಿಲಾಸ ರಸ್ತೆಯಲ್ಲಿರುವ ಮರಿಮಲ್ಲಪ್ಪ ಪಿ.ಯು ಕಾಲೇಜು, ಜೆ.ಎಲ್.ಬಿ ರಸ್ತೆಯಲ್ಲಿರುವ ಮಹಾರಾಜ ಸರ್ಕಾರಿ ಪಿ.ಯು ಕಾಲೇಜು, ಎಂ.ಜಿ ರಸ್ತೆಯಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯ, ಸರಸ್ವತಿಪುರಂನಲ್ಲಿರುವ ಟಿ.ಟಿ.ಎಲ್ ಕಾಲೇಜು ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್, ಲಕ್ಷ್ಮೀಪುರಂನಲ್ಲಿರುವ ಕ್ರಿಸ್ಟ್ ದಿ ಕಿಂಗ್ಸ್ ಕಾನ್ವೆಂಟ್, ನ್ಯೂ ಸಯ್ಯಾಜಿ ರಸ್ತೆಯಲ್ಲಿರುವ ಡಿ.ಬನುಮಯ್ಯ ಸ್ವತಂತ್ರ ಪಿ.ಯು ಕಾಲೇಜು, ಸರಸ್ವತಿಪುರಂನಲ್ಲಿರುವ ವಿಜಯ ವಿಠಲ ಸಂಯುಕ್ತ ಪಿ.ಯು ಕಾಲೇಜು, ಜಯಲಕ್ಷ್ಮಿಪುರಂನಲ್ಲಿರುವ ಎಸ್.ಬಿ.ಬಿ.ಆರ್ ಮಹಾಜನ ಪಿ.ಯು ಕಾಲೇಜು, ಒಂಟಿಕೊಪ್ಪಲಿನಲ್ಲಿರುವ ಸರ್ಕಾರಿ ಪಿ.ಯು ಕಾಲೇಜು, ನಜರ್ಬಾದ್ನಲ್ಲಿರುವ ಸರ್ಕಾರಿ ವಿಭಜಿತ ಮಹಾರಾಜ ಪಿ.ಯು ಕಾಲೇಜು, ಜಯಲಕ್ಷ್ಮಿಪುರಂನಲ್ಲಿರುವ ಮಹಾಜನ ಪಬ್ಲಿಕ್ ಸ್ಕೂಲ್ ಮತ್ತು ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮಹಾರಾಣಿ ಸರ್ಕಾರಿ ಪಿ.ಯು ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಿಷೇಧಾಜ್ಞೆ ಹೇರಲಾಗಿದೆ.
ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No comments!
There are no comments yet, but you can be first to comment this article.