ರಾಯಚೂರು: ಆಡಿಯೋ ಟೇಪ್ ಹಗರಣದಲ್ಲಿ ಸಿಕ್ಕಿ ಬಿದ್ದಿರುವ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದ್ದು, ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶ ಮಾಡುವ ಮುನ್ನವೇ ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ರಾಯಚೂರು ಜಿಲ್ಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಎ ೧ ಆರೋಪಿಯಾಗಿದ್ದರೆ, ದೇವದುರ್ಗ ಕ್ಷೇತ್ರದ ಶಾಸಕ ಶಿವನಗೌಡ ಎ ೨, ಹಾಸನ ಕ್ಷೇತ್ರದ ಶಾಸಕ ಪ್ರೀತಂಗೌಡ ಎ ೩ ಹಾಗೂ ಹಿರಿಯ ಪತ್ರಕರ್ತ ಮರಮಕಲ್ ಎ ೪ ಆರೋಪಿಯಾಗಿದ್ದಾರೆ.