ಬೆಂಗಳೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಲಿದೆ.

ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಯುವ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳಲಿದೆ. ರಾಜ್ಯ ಬಿಜೆಪಿಯ ಎಲ್ಲ ಸಂಸದರಿಗೆ ಟಿಕೆಟ್ ನೀಡುವುದು ಬಹುತೇಕ ಅಂತಿಮಗೊಂಡಿದೆ.

ಪರಾಜಿತ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವರಿಷ್ಠರಿಗೆ ಸಲ್ಲಿಸಿದ್ದು, ಸಮಗ್ರವಾಗಿ ಪರಿಶೀಲಿಸಿ ಯಾರಿಗೆ ಅವಕಾಶ ಕೊಡಬೇಕು ಎಂಬುದು ತೀರ್ಮಾನವಾಗಲಿದೆ.

ಇಂದು ಸಂಜೆಯೊಳಗೆ ಪಟ್ಟಿ ರಿಲೀಸ್ ಮಾಡಲಾಗುತ್ತದೆ ಎಂಬುದು ಬಿಜೆಪಿ ಮುಖಂಡರುಗಳು ಹೇಳುತ್ತಾರೆ.