ಬಳ್ಳಾರಿ: ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದ್ದು, ಈ ನಡುವೆ ಬಳ್ಳಾರಿಯಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಧೃಡವಾಗಿರುವ ಮಾಹಿತಿ ಲಭ್ಯವಾಗಿದೆ.

ಜಿಲ್ಲೆಯ ಹೊಸಪೇಟೆ ನಗರದಲ್ಲಿ ಒಂದೇ ಕುಟುಂಬವೊಂದರ ಮೂವರಿಗೆ ಕೊರೊನಾ ಸೋಂಕು ಧೃಡವಾಗಿರುವುದು ವೈದ್ಯಕೀಯ ಪರೀಕ್ಷೆಯಿಂದ ಗೊತ್ತಾಗಿದೆ. ಈ ಮೂಲಕ. ರಾಜ್ಯದಲ್ಲಿ ಮಾರಕ ವೈರಸ್ ಗೆ ತುತ್ತಾದವರ ಸಂಖ್ಯೆ 91 ಕ್ಕೆ ಏರಿಕೆಯಾಗಿದೆ.

ಈ ಹಿನ್ನೆಲೆ ಇಂದಿನಿಂದ ಹೊಸಪೇಟೆ ನಗರ ಸಂಪೂರ್ಣ ಬಂದ್ ಆಗಿರಲಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಹೊಸಪೇಟೆ ಸಂಪೂರ್ಣ ಬಂದ್ ಆಗಿರಲಿದೆ, ನಗರಕ್ಕೆ ಯಾರೂ ಒಳ ಬರುವಂತಿಲ್ಲ, ನಗರದಿಂದ ಯಾರೂ ಕೂಡ ಹೊರ ಹೋಗುವಂತಿಲ್ಲ. ಸಾರ್ವಜನಿಕರ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದ್ರೆ ಕ್ರಮ ಕೈಗೊಳ್ಳಲಾಗುವುದು ಡಿಸಿ ಎಚ್ಚರಿಕೆ ನೀಡಿದ್ದಾರೆ