ನವದೆಹಲಿ: ಸೌತ್ ಇಂಡಿಯನ್ ಬ್ಯಾಂಕ್ ನ ವಿವಿಧ ಶಾಖಾ ಕಚೇರಿಗಳಲ್ಲಿ ಖಾಲಿಯಿರುವ 15 ಪ್ರೊಬೆಷನರಿ ಮ್ಯಾನೇಜರ್(ಸಿಎ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆಯಲ್ಲಿ ನೊಂದಾವಣಿಗೊಂಡವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹಾಗೆಯೇ ಅಭ್ಯರ್ಥಿಗಳು ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಸಿದ್ಧರಾಗಿರಬೇಕು. ಅರ್ಜಿ ಸಲ್ಲಿಸಲು ಫೆ. 23 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ www.southindianbank.com ಗೆ ಭೇಟಿ ನೀಡಬಹುದು.