ಚಿತ್ರದುರ್ಗ: ಬರದ ನಾಡು ಚಿತ್ರದುರ್ಗ ಜಿಲ್ಲೆಯ ಜಲದಾಹ ತೀರಿಸುವ ಉದ್ದೇಶದಿಂದಾಗಿ ಎತ್ತಿನಹೊಳೆ ಯೋಜನೆಯಿಂದ ನೀರು ಒದಗಿಸುವ ಸಂಕಲ್ಪ ಹೊಂದಲಾಗಿದೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಲ ಜಾರಕಿಹೊಳಿ ಹೇಳಿದರು.

ಈ ಕುರಿತು ಈಗಾಗಲೇ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಎತ್ತಿನಹೊಳೆ ಯೋಜನೆಯಿಂದಲೂ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಜಲಾಯಶಕ್ಕೆ ನೀರು ಸಿಗಲಿದೆ ಎಂದು ಹೇಳಿದರು. !