ಚಿತ್ರದುರ್ಗ : ಎಸ್.ಜೆ.ಎಂ. ಮಹಿಳಾ ಮಹಾವಿದ್ಯಾಲಯದ ರೆಡ್‌ಕ್ರಾಸ್ ಘಟಕದ ವತಿಯಿಂದ ಮಹಾವಿದ್ಯಾಲಯದ ವಿದ್ಯಾರ್ಥಿನಿಯರ ರಕ್ತ ಪರೀಕ್ಷಾ ಶಿಬಿರವನ್ನು ಎಸ್.ಜೆ.ಎಂ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು.

ರಕ್ತ ಪರಿಶೀಲನಾ ತಜ್ಞರಾದ ಶ್ರೀನಿವಾಸ್, ರೆಡ್‌ಕ್ರಾಸ್ ಘಟಕದ ಅಧಿಕಾರಿ ಪ್ರೊ.ಎಸ್.ಬಿ. ಶಿವಕುಮಾರ್, ಎನ್‌ಎಸ್‌ಎಸ್ ಅಧಿಕಾರಿ ಎಲ್.ರಾಜಾನಾಯ್ಕ, ಡಾ.ಸಿಟಿ. ಜಯಣ್ಣ, ಎಸ್.ಜೆ.ಎಂ. ದಂತಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೌರಮ್ಮ, ಎಸ್.ಜೆ.ಎಂ. ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸಿ.ಬಸವರಾಜಪ್ಪ ಉಪಸ್ಥಿತರಿದ್ದರು.