ಬೆಂಗಳೂರು : 2019 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 17 ರಂದು ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

ಇದೇ ಮೊದಲ ಬಾರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಿಇಟಿ ಪರೀಕ್ಷೆ ಆರಂಭಕ್ಕೂ ಮುನ್ನವೇ ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸುತ್ತಿರುವುದರಿಂದ ಏ. 17 ರಂದು ಪ್ರಕಟವಾಗುವುದು ಖಚಿತವಾಗಿದೆ. ಸಿಇಟಿ ಏ. 29 ರಿಂದ ಮೇ. 1 ರ ವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.