ಚಿತ್ರದುರ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುವುದು ಒಂದು ಶಕ್ತಿಯಾಗಿದ್ದು, ಒಂದು ಮತದ ಮಹತ್ವ ಒಂದು ಮತದಿಂದ ಗೆದ್ದವರಿಗೆ ಮಾತ್ರ ಗೊತ್ತು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರೂ ಆಗಿರುವ ಪಿ.ಎನ್ ರವೀಂದ್ರ ತಿಳಿಸಿದರು.

ತ.ರಾ.ಸು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನದ ಮಹತ್ವ ಹಾಗೂ ವಿದ್ಯುನ್ಮಾನ ಮತಯಂತ್ರದ ಬಳಕೆಯ ಬಗ್ಗೆ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ತಮಟೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಮತದಾನ ನಮ್ಮ ಹಕ್ಕು ಒಳ್ಳೆಯ ಅಭ್ಯರ್ಥಿಗಳಿಗೆ ಮತ ಹಾಕಿದರೆ ಪ್ರಜಾಪ್ರಭುತ್ವ ವ್ಯವಸೆಯಲ್ಲ್ಥಿ ಒಳ್ಳೆಯ ಆಡಳಿತವನ್ನು ನೋಡಬಹುದಾಗಿದೆಯೆಂದರು.

೧-೧-೨೦೧೮ ಕ್ಕೆ ೧೮ ವರ್ಷ ತುಂಬಿದ ಎಲ್ಲಾ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರಿಸುವುದು ಹಾಗೂ ಆರ್ಹರನ್ನು ಮತದಾರರ ಪಟ್ಟಿಗೆ ಸೇರಿಸಲು ಪ್ರೇರೇಪಿಸಬೇಕೆಂದು ಅವರು ಮನವಿ ಮಾಡಿದರು ತನ್ನದೊಂದು ಮತ ದೇಶದ ಅಭಿವೃದ್ಧಿಗೆ ಕಾರಣವಾಗಲಿದೆಯೆಂದು ಅರಿತು ಪ್ರತಿಯೊಬ್ಬರೂ ಮತ ಚಲಾಯಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮೀಪತಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುಳಮ್ಮ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ರೇಖಾ, ಹಾಗೂ ಸಹಾಯಕ ನಿರ್ದೇಶಕ ಹನುಮಂತಪ್ಪ, ಮತ್ತಿತರ ಗಣ್ಯರು ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಚಾರ ಸಮಿತಿಯ ಕಾರ್ಯದರ್ಶಿ ಬಿ. ಧನಂಜಯಪ್ಪ ಸರ್ವರನ್ನು ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ತಿಳಿಸಿದರು ಪ್ರತಿಯೊಬ್ಬರೂ ಮತ ಚಲಾಯಿಸಬೇಕೆಂದು ಪ್ರತಿಜ್ಞಾ ವಿಧಿ ಭೋಧಿಸಿದರು. ಸೃಷ್ಠಿ ಸಾಕ್ಷರತ ಕಲಾ ತಂಡದಿಂದ ಮತದಾರರ ಜಾಗೃತಿ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.