ಬೆಂಗಳೂರು : ಲಾಕ್ ಡೌನ್ ನಿಂದಾಗಿ ಕಂಗೆಟ್ಟಿದ್ದ ಕಟ್ಟಡ ಕಾರ್ಮಿಕರ ನರೆವಿಗೆ ನಿಂತಿರುವ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ಸಹಾಯಧನದ ಜೊತೆಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ 1 ಸಾವಿರ ರೂಪಾಯಿ ಸಹಾಯ ಧನ ನೀಡುವುದಾಗಿ ಘೋಷಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ರಾಜ್ಯದಲ್ಲಿನ ಕೊರೊನಾ ನಿಯಂತ್ರಣ ಸೇರಿದಂತೆ ವಿವಿಧ ವಿಚಾರಗಳ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ರು. ಈ ಸಭೆಯಲ್ಲಿ, ಲಾಕ್ ಡೌನ್ ನಿಂದಾಗಿ ಕಂಗೆಟ್ಟ ಕಾರ್ಮಿಕರಿಗೆ ರಿಲೀಫ್ ನೀಡಿದ್ದು, ಕಾರ್ಮಿಕರ ನೆರವಿಗೆ ಸರ್ಕಾರ ನಿಲ್ಲುವಂತ ತೀರ್ಮಾನವನ್ನು ಕೈಗೊಳ್ಳಲಾಗಿದೆ.

15 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ಹಣ ಜಮೆ ಆಗಲಿದೆ. ಹೀಗೆ ರಾಜ್ಯ ಸರ್ಕಾರದಿಂದ ರೂ.1 ಸಾವಿರ ಹೆಚ್ಚುವರಿ ಸಹಾಯಧನವನ್ನು ಕಾರ್ಮಿಕರ ಖಾತೆಗಳಿಗೆ ಜಮೆ ಮಾಡಿ ಎಂಬುದಾಗಿ ಕಾರ್ಮಿಕ ಇಲಾಖೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಮೂಲಕ ಕಾರ್ಮಿಕರಿಗೆ ಬಿಗ್ ರಿಲೀಫ್ ನೀಡಿದ್ದಾರೆ.