ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕನ್ನಡ ಪಕ್ಷದ ಅಭ್ಯರ್ಥಿಯಾಗಿ ರಾಜಮದಕರಿನಾಯಕ ಗುರುವಾರ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಕೋಟೆ ರಸ್ತೆಯಲ್ಲಿರುವ ಉಚ್ಚಂಗಿಯಲ್ಲಮ್ಮನಿಗೆ ಪೂಜೆ ಸಲ್ಲಿಸಿ ನಂತರ ರಾಜಾವೀರ ಮದಕರಿನಾಯಕ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ಗೆ ಮಾಲಾರ್ಪಣೆ ಮಾಡಿ ಅಭಿಮಾನಿಗಳೊಂದಿಗೆ ಆಗಮಿಸಿದ ರಾಜ ಮದಕರಿನಾಯಕ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಹಾಜರಿದ್ದರು.