ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19ರ ಸಂದಿಗ್ದ ಪರಿಸ್ಥಿತಿಯಲ್ಲೂ ರಾಜ್ಯ ಸರ್ಕಾರಿ ನೌಕರರ ಆರ್ಥಿಕ ಪರಿಸ್ಥಿತಿಯನ್ನು ಸಹಾನುಭೂತಿಯಿಂದ ಮನಗಂಡು, 2014 ರಿಂದ 2016ಕ್ಕೆ ಅಂತ್ಯಗೊಂಡ ದ್ವೈವಾರ್ಷಿಕ ಅವಧಿಗೆ ರಾಜ್ಯ ಸರ್ಕಾರಿ ನೌಕರರ ಕೆ.ಜಿ.ಐ.ಡಿ ವಿಮಾ ಪಾಲಿಸಿಗಳ ಮೇಲೆ ಪ್ರತಿ ರೂ.1000/- ಗಳಿಗೆ ವಾರ್ಷಿಕ 85-00 ರೂಪಾಯಿಗಳ “ಬೋನಸ್” ಮಂಜೂರು ಮಾಡಿರುತ್ತಾರೆ.

ಸರ್ಕಾರಿ ನೌಕರರ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಯುತ ಬಿ.ಎಸ್.ಯಡಿಯೂರಪ್ಪರವರಿಗೆ ಹಾಗೂ ಸಚಿವ ಸಂಪುಟದ ಸಚಿವರಿಗೆ, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳಿಗೆ ಹಾಗೂ ಈ ಬಗ್ಗೆ ಅವಿರತವಾಗಿ ಹೋರಾಟ ನಡೆಸಿ ಸಮಸ್ತ ಸರ್ಕಾರಿ ನೌಕರರಿಗೆ ನ್ಯಾಯ ಒದಗಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿಯವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಚಿತ್ರದುರ್ಗದ ಅಧ್ಯಕ್ಷರಾದ  ಕೆ.ಮಂಜುನಾಥ ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು,ನಿರ್ದೇಶಕರು, ನಾಮನಿರ್ದೇಶಿತ ಸದಸ್ಯರು, ಎಲ್ಲಾ ತಾಲ್ಲೂಕು ಸಂಘಗಳ ಅಧ್ಯಕ್ಷರು, ನಿರ್ದೇಶಕರು, ನಾಮನಿರ್ದೇಶಿತ ಸದಸ್ಯರು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

 

 

 

 

 

ಕೆ.ಮಂಜುನಾಥ