ಚಿತ್ರದುರ್ಗ: ಕರ್ನಾಟಕ ವಿಧಾನಪರಿಷತ್‍ಗೆ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಡೆಯಲಿರುವ ದ್ವೈವಾರ್ಷಿಕ ಚುನಾವಣೆ 2018 ರ ಬೆಂಗಳೂರು ವಿಭಾಗದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಚುನಾವಣೆಗಾಗಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.
ಭಾರತದ ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆ ವಿವರ:- ದಿನಾಂಕ 15-5-2018 ಮಂಗಳವಾರ. ನಾಮಪತ್ರ ಸಲ್ಲಿಸಲು ಕೊನೆ ದಿನಾಂಕ 22-5-2018 ಮಂಗಳವಾರ, ನಾಮಪತ್ರಗಳ ಪರಿಶೀಲನೆ ದಿನಾಂಕ 23-5-2018 ಬುಧವಾರ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನಾಂಕ 25-5-2018 ಶುಕ್ರವಾರ. ಮತದಾನದ ದಿನಾಂಕ 8-6-2018 ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ. ಮತಗಳ ಎಣಿಕೆಯು 12-6-2018 ರಂದು ನಡೆಯಲಿದ್ದು ನೀತಿಸಂಹಿತೆಯು ಜೂನ್ 15 ರವರೆಗೆ ಜಾರಿಯಲ್ಲಿರುತ್ತದೆ.