ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹನುಮಲಿ ಷಣ್ಮುಖಪ್ಪನವರು ಹಳೆಕಲ್ಲಹಳ್ಳಿ, ಗೊಲ್ಲರಹಟ್ಟಿ ಇನ್ನು ಮುಂತಾದ ಕಡೆಗಳಲ್ಲಿ ಶನಿವಾರ ಚುರುಕಿನ ಮತಯಾಚನೆ ಕೈಗೊಂಡರು.
ಜಿ.ಪಂ.ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಮತಯಾಚನೆಯಲ್ಲಿ ಭಾಗವಹಿಸಿ ಮಾತನಾಡುತ್ತ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳು ಜನತೆಯ ಮನದಲ್ಲಿ ಇನ್ನು ಉಳಿದಿರುವುದರಿಂದ ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಹಾಗಾಗಿ ಅಭ್ಯರ್ಥಿ ಹನುಮಲಿ ಷಣ್ಮುಖಪ್ಪನವರನ್ನು ಗೆಲ್ಲಿಸಿ ಕೋಮುವಾದಿ ಬಿಜೆಪಿ.ಯನ್ನು ತಿರಸ್ಕರಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಅಭ್ಯರ್ಥಿ ಹನುಮಲಿ ಷಣ್ಮುಖಪ್ಪ ಮತಯಾಚಿಸಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರವನ್ನು ಇಲ್ಲಿಯವರೆಗೂ ಆಳಿದ ಬಿಜೆಪಿ.ಮತ್ತು ಜೆಡಿಎಸ್.ಸಂಪೂರ್ಣವಾಗಿ ಕಡೆಗಣಿಸಿವೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಈ ಚುನಾವಣೆಯಲ್ಲಿ ನನನ್ನು ಗೆಲ್ಲಿಸಿ ಅಧಿಕಾರ ಕೊಡಿ ನಾಗರೀಕರಿಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕ್ಷೇತ್ರದ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಟಿ.ಜಗದೀಶ್, ಚಿತ್ರದುರ್ಗ ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಕೆ.ಪಿ.ಸಿ.ಸಿ.ಮಹಿಳಾ ಘಟಕದ ಕಾರ್ಯಕಾರಿಣಿ ಸಮಿತಿ ಸದಸ್ಯೆ ಮೋಕ್ಷರುದ್ರಸ್ವಾಮಿ, ಕಾರ್ಯದರ್ಶಿ ರುದ್ರಾಣಿ, ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ನಜ್ಮತಾಜ್,
ತಾ.ಪಂ.ಅಧ್ಯಕ್ಷ ವೇಣುಗೋಪಾಲ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ.ಹಸನ್‌ತಾಹೀರ್, ಚಿತ್ರದುರ್ಗ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಆರತಿ ಮಹಡಿಶಿವಮೂರ್ತಿ, ಮಹಮದ್ ರಫಿ, ಐ.ಎನ್.ಟಿ.ಯು.ಸಿ.ರಾಜ್ಯ ಪ್ರಧಾನ ಕಾರ್ಯದರ್ಶಿ ಮೆಹಬೂಬ್ ಖಾತೂನ್ ಇನ್ನು ಮುಂತಾದವರು ಮತಯಾಚನೆಯಲ್ಲಿ ಪಾಲ್ಗೊಂಡಿದ್ದರು.