ಮಂಗಳೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಪಲ್ಟಿ ಹೊಡೆದು ನೆಲಕ್ಕೆ ಅಪ್ಪಳಿಸಿ, ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಪಣೋಲಿಬೈಲು ನಿವಾಸಿ ದಯಾನಂದ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಅತಿ ವೇಗದಿಂದ ಚಲಿಸುತ್ತಿದ. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸವಾರ ಗಾಳಿಯಲ್ಲಿ ಪಲ್ಟಿ ಹೊಡೆದು ನೆಲಕ್ಕೆ ಅಪ್ಪಳಿಸಿದ್ದು, ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.