ಬೆಂಗಳೂರು : ಕೆಎಸ್ ಆರ್ ಟಿಸಿ ನೌಕರರಿಗೆ ರಾಜ್ಯ ಸಾರಿಗೆ ಇಲಾಖೆಯು ಕೆಂಪು ವಲಯದ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲ ಜಿಲ್ಲೆಗಳಲ್ಲಿ ಎಲ್ಲಾ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶಿಸಿದ್ದಾರೆ.

ಕೊರೊನಾ ಪ್ರಕರಣಗಳನ್ನಾಧರಿಸಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು ಜಿಲ್ಲೆಗಳನ್ನು ಕೆಂಪು ವಲಯ ಜಿಲ್ಲೆಗಳನ್ನಾಗಿ ಗುರುತಿಸಲಾಗಿದೆ. ಹಸಿರು, ಕೇಸರಿ ವಲಯದ ಜಿಲ್ಲೆಗಳ ಸರ್ಕಾರಿ ಕಚೇರಿಗಳಲ್ಲಿ ಎ, ಬಿ ಸೇರಿ ಎಲ್ಲ ವೃಂದದ ನೌಕರರು ಹಾಗೂ ಕೆಂಪು ವಲಯದ ಜಿಲ್ಲೆಗಳಲ್ಲಿ ಶೇ. 33 ರಷ್ಟು ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಇನ್ನು ಕೆಂಪು ವಲಯದ ಮೂರು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೆಎಸ್ ಆರ್ ಟಿಸಿಯ ಶೇ. 100 ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.