ಚಿತ್ರದುರ್ಗ :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಮೈಸೂರಿನಲ್ಲಿ ಕೆಎಎಸ್ ಮತ್ತು ಎಫ್‍ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಕರ್ನಾಟಕ ಸರ್ಕಾರವು ಬರುವ ಮೇ ಮಾಹೆಯಲ್ಲಿ ಕೆಎಎಸ್ ಮತ್ತು ಎಫ್‍ಡಿಎ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ತರಬೇತಿ ಆಯೋಜಿಸಲಾಗಿದೆ.  ಆಸಕ್ತರು  ಫೆ. 20 ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ಕಛೇರಿಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಮಾಹಿತಿಗೆ 0821-2515944 ಕ್ಕೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ  ಪ್ರೊ. ಲಿಂಗರಾಜ ಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.