ದಾವಣಗೆರೆ : ಕೊರೊನಾ ಸೋಂಕು ಹರಡುವವರು ದೇಶದ್ರೋಹಿಗಳು, ಅವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಈ ಹಿಂದೆ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿತ್ತು. ಆದರೆ, ನಿಜಾಮುದ್ದೀನ್ ಗೆ ಹೋಗಿ ಬಂದವರಿಂದ ಸೋಂಕು ವ್ಯಾಪಕವಾಗಿ ಹೆಚ್ಚಾಗಿದೆ. ನಿಜಾಮುದ್ದೀನ್ ನಿಂದ ವಾಪಾಸ್ ಆದವರು ಸ್ವಯಂಪ್ರೇರಿತವಾಗಿ ಆಸ್ಪತ್ರೆಗೆ ಹೋಗಿ ತಪಾಸಣೆಗೆ ಒಳಪಟ್ಟಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕೊರೊಡನಾ ಹರಡುವವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಕಿಡಿಕಾರಿದರು.