ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಈಗಾಗಲೇ ಲಾಕ್ ಡೌನ್ ಮಾಡಲಾಗಿದ್ದು, ಸಾರ್ವಜನಿಕ ಸಂಚಾರ ನಿರ್ಬಂಧಿಸಲಾಗಿದೆ. ಇದರ ಪರಿಣಾಮ ವಿವಿಧ ಕ್ಷೇತ್ರಗಳಿಗೆ ತಟ್ಟಿದ್ದು, ಕರ್ನಾಟಕದ ಹಾಲು ಒಕ್ಕೂಟ ಸಹ ಸಮಸ್ಯೆ ಎದುರಿಸುತ್ತಿದೆ.

ಸದ್ಯ ಪ್ರತಿದಿನ 10 ಲಕ್ಷ ಲೀಟರ್ ಹಾಲು ಸೇಲ್ ಆಗದೆ ಉಳಿಯುತ್ತಿದೆ ಎಂದು ವರದಿಯಾಗಿದೆ. ಹೀಗಾಗಿ ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಹಾಲಿನ ದರ ಇಳಿಕೆ ಮಾಡುವ ಸುಳಿವು ನೀಡಿದ್ದು, ಇದರಿಂದ ರೈತರಿಗೆ ಯಾವುದೇ ತೊಂದರೆ ಆಗಲ್ಲ ಎಂದು ಹೇಳಿದ್ದಾರೆ.