ಚಿತ್ರದುರ್ಗ : ಬುಧವಾರದಂದು ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ನ ಯಾವುದೇ ಪಾಸಿಟೀವ್ ಪ್ರಕರಣ ವರದಿಯಾಗಿಲ್ಲ.  103 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದು, 106 ಜನರ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಒಟ್ಟು 07 ಪಾಸಿಟೀವ್ ಪ್ರಕರಣಗಳ ಪೈಕಿ ಒಬ್ಬರು ಈಗಾಗಲೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, 06 ಜನರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಮೇ. 13 ರಂದು ಒಟ್ಟು 103 ಜನರ ಗಂಟಲುದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ.  ಇದುವರೆಗೂ 1415 ಶಂಕಿತರ ಗಂಟಲು ದ್ರವ ಹಾಗೂ ರಕ್ತ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದು ಈ ಪೈಕಿ ಈವರೆಗೆ 1260 ಜನರ ವರದಿ ನೆಗಟೀವ್ ಎಂದು  ವರದಿಯಾಗಿದೆ.  106 ಜನರ ಪರೀಕ್ಷಾ ವರದಿ ಬರುವುದು ಬಾಕಿ ಇದೆ.

ಈವರೆಗೆ ಜಿಲ್ಲೆಯಲ್ಲಿ 310 ಜನರು 28 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. ಸದ್ಯ ಹೊರ ಜಿಲ್ಲೆ, ಹೊರ ರಾಜ್ಯದಿಂದ ಬಂದವರು ಹಾಗೂ ಶಂಕಿತರ ಸಂಪರ್ಕ ಹಿನ್ನೆಲೆ ಹೊಂದಿರುವ 256 ಜನರನ್ನು ಹೋಂ ಕ್ವಾರಂಟೈನ್ ನಿಗಾನಲ್ಲಿ ಇರಿಸಲಾಗಿದ್ದು, 81 ಜನರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇಡಲಾಗಿದೆ.  804 ಜನರಿಗೆ ಮೇ. 13 ರಂದು ಸ್ಕ್ರೀನಿಂಗ್ ಮಾಡಲಾಗಿದ್ದು,  ಇದುವರೆಗೂ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಈ ಜಿಲ್ಲೆಗೆ ಆಗಮಿಸಿದ  243689 ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದೆ.  ಮೇ. 13 ರಂದು ಫಿವರ್ ಕ್ಲಿನಿಕ್‍ಗಳಲ್ಲಿ 279 ಜನರಿಗೆ ಜ್ವರ ತಪಾಸಣೆ ಮಾಡಿದ್ದು, ಇದುವರೆಗೂ ಜಿಲ್ಲೆಯಲ್ಲಿ ಫಿವರ್ ಕ್ಲಿನಿಕ್‍ನಲ್ಲಿ ಒಟ್ಟು 13412 ಜನರಿಗೆ ಜ್ವರ ತಪಾಸಣೆ ಮಾಡಲಾಗಿದೆ.  ಜಿಲ್ಲೆಯಲ್ಲಿ 70 ಜನರಿಗೆ ಮಾನಸಿಕ ಆರೋಗ್ಯ ಕುರಿತು ಆಪ್ತ ಸಮಾಲೋಚನೆ ಮಾಡಲಾಗಿದ್ದು, ಈವರೆಗೆ 511 ಜನರಿಗೆ ಮಾನಸಿಕ ಆರೋಗ್ಯ ತಜ್ಞರಿಂದ ಮೂರ್ನಾಲ್ಕು ದಿನಗಳಿಗೊಮ್ಮೆ ಆಪ್ತ ಸಮಾಲೋಚನೆ ಮಾಡಿಸಲಾಗಿದೆ.  ಉಸಿರಾಟದ ತೊಂದರೆ, ತೀವ್ರ ಜ್ವರ ನಂತಹ ಆರೋಗ್ಯ ಸಮಸ್ಯೆ ಹೊಂದಿರುವ 28 ಜನರಿಗೆ ಸ್ಕ್ರೀನಿಂಗ್ ಮಾಡಿದ್ದು, ಇದುವರೆಗೆ ಇಂತಹ 1065 ರೋಗಿಗಳಿಗೆ ತಪಾಸಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಮೇ. 17 ರವರೆಗೆ ಲಾಕ್‍ಡೌನ್ ಮುಂದುವರೆಸಲಾಗಿದ್ದು, ಯಾವುದೇ ಆರೋಗ್ಯ ಮಾಹಿತಿಗೆ 104 ಅಥವಾ 08194-1077 ಸಂಖ್ಯೆಗೆ ಅಥವಾ ಸಂಬಂಧಪಟ್ಟ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ತಿಳಿಸಿದ್ದಾರೆ.