ಚಿತ್ರದುರ್ಗ: ಕೌಶಲ್ಯ ಆಧಾರಿತ ಎಲ್ಲ ಬಗೆಯ ಕೆಲಸಗಳೂ ವಿಶ್ವಕರ್ಮ ಸಮಾಜ ಈ ಜಗತ್ತಿಗೆ ನೀಡಿದ ಕೊಡುಗೆಯಾಗಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಹೇಳಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸರಳವಾಗಿ ಆಯೋಜಿಸಲಾಗಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕುಶಲ ಕಲೆಗಳು ಸೇರಿದಂತೆ ಎಲ್ಲ ಬಗೆಯ ಕಲೆಗಳು ವಿಶ್ವಕರ್ಮ ಸಮಾಜ ಈ ಜಗತ್ತಿಗೆ ನೀಡಿದ ಕೊಡುಗೆಯಾಗಿದೆ. ಇದಕ್ಕೆಂದೇ ವಿಶ್ವಕರ್ಮ ಸಮುದಾಯ ಕಲೆಗೆ ಪ್ರಸಿದ್ಧಿಯನ್ನು ಹೊಂದಿದೆ. ವಿಶ್ವಕರ್ಮರ ಕುರಿತು ಕಾರ್ಯಕ್ರಮ ಆಯೋಜಿಸುವ ಮೂಲಕ ಭವಿಷ್ಯದ ಪೀಳಿಗೆಗೆ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಹೇಳಿದರು.

ಪಿ. ನರೇಂದ್ರಾಚಾರ್ಯ ಅವರು, ವಿಶ್ವಕರ್ಮರ ಕುರಿತು ವಿಶೇಷ ಉಪನ್ಯಾಸ ನೀಡಿದರು. ವಿಶ್ವಕರ್ಮ ಸಮಾಜದ ಅಧ್ಯಕ್ಷ ತಿಪ್ಪೇಶಾಚಾರ್ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿ. ಪ್ರಸನ್ನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಿಜಲಿಂಗಪ್ಪ, ಸಮಾಜದ ಮುಖಂಡರಾದ ನಾರಾಯಣಾಚಾರ್ಯ, ಶಂಕರಾಚಾರ್ಯ, ಸೇರಿದಂತೆ ವಿವಿಧ ಮುಖಂಡರು, ಮಹಿಳಾ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.