ಚಿತ್ರದುರ್ಗ: ಕೋವಿಡ್-19 ರೋಗ ತಡೆ ನಿಯಂತ್ರಣ ಕಾರ್ಯದ ನಿಮಿತ್ತ ದೇಶಾದ್ಯಂತ ಲಾಕ್‍ಡೌನ್ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಸೂಚಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಜ್ವರ ಲಕ್ಷಣದ ರೋಗಿಗಳ ಚಿಕಿತ್ಸೆ ಹೊರತುಪಡಿಸಿ, ಉಳಿದ ರೋಗಗಳ ಹಾಗೂ ತುರ್ತು ಚಿಕಿತ್ಸೆ ಅವಶ್ಯವಿರುವ ರೋಗಿಗಳ ಚಿಕಿತ್ಸೆಯನ್ನು ಕೈಗೊಳ್ಳಬೇಕು. ರೋಗಿಗಳ ವೈದ್ಯಕೀಯ ಸೇವೆಗಾಗಿ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಬೆಳಿಗ್ಗೆಯಿಂದ ರಾತ್ರಿಯವರೆಗೆ ತೆರೆಯುವುದರ ಮೂಲಕ ರೋಗಿಗಳಿಗೆ ಸೇವೆ ಒದಗಿಸಬೇಕು ಎಂದು ಪ್ರಕಟಣೆ ತಿಳಿಸಿದೆ.