ಚಿತ್ರದುರ್ಗ: ಕುಂಚಿಗನಾಳ್ ಕಣಿವೆ ಬಳಿ ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಖಾಸಗಿ ಬಸ್ ಪಲ್ಟಿಯಾಗಿದ್ದು,  ಘಟನೆಯಲ್ಲಿ 10 ಜನರಿಗೆ‌ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ವೋಲ್ವೋ ಬಸ್ ಚಿತ್ರದುರ್ಗ ತಾಲೂಕಿನ ಕುಂಚಿಗನಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಲಾರಿಗೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ದಾಟಿ ಬಂದು ಪಲ್ಟಿಯಾಗಿದೆ. ಘಟನೆಯಲ್ಲಿ ಮೂರು ಜನ ಗಂಭೀರ ಗಾಯಗೊಂಡಿದ್ದು, 10 ಜನ ಗಾಯಾಳುಗಳಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.