ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳಿಗೆ ದೃಢೀಕೃತ ದಾಖಲಾತಿಗಳನ್ನು ಸಲ್ಲಿಸದೇ ಇರುವ ಅಭ್ಯರ್ಥಿಗಳಿಗೆ ದೃಢೀಕೃತ ದಾಖಲಾತಿಗಳನ್ನು ಸಲ್ಲಿಸಲು ಜು.10 ವರೆಗೆ ದಿನಾಂಕವನ್ನು ವಿಸ್ತರಿಸಿದೆ.

ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಪರಿಶೀಲನಾ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಹಾಗೂ ಅಭ್ಯರ್ಥಿಗಳು ಜೂ.24 ರೊಳಗೆ ದೃಢೀಕೃತ ದಾಖಲಾತಿಗಳನ್ನು ಸಲ್ಲಿಸಲು ಕಚೇರಿಯ ಅಧಿಕೃತ ವೆಬ್‍ಸೈಟ್ ಮೂಲಕ ಹಾಗೂ ಅಭ್ಯರ್ಥಿಗಳ ಮೊಬೈಲ್‍ಗೆ ಎಸ್‍ಎಂಎಸ್ ಮೂಲಕ ತಿಳಿಸಿ ನೋಂದಾಯಿತ ಅಂಚೆ ಮೂಲಕ ಅಭ್ಯರ್ಥಿಗಳಿಗೆ ತಿಳುವಳಿಕೆ ಪತ್ರವನ್ನು ನೀಡಲಾಗಿತ್ತು. ಆದರೆ ಕೋವಿಡ್-19 ಕಾರಣದಿಂದ  ದಾಖಲಾತಿಗಳನ್ನು ಸಲ್ಲಿಸದೇ ಇರುವ ಅಭ್ಯರ್ಥಿಗಳಿಗೆ ಇದೀಗ ದಿನಾಂಕವನ್ನು ಜು. 10 ರವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ನಿಗದಿತ ದಿನಾಂಕದೊಳಗೆ ಜಿಲ್ಲಾಧಿಕಾರಿಗಳು, ಹಾಗು ಅಧ್ಯಕ್ಷರು, ಗ್ರಾಮಲೆಕ್ಕಿಗರ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರ, ಚಿತ್ರದುರ್ಗ ಜಿಲ್ಲೆ ವಿಳಾಸಕ್ಕೆ ಅಭ್ಯರ್ಥಿಗಳು ಮುದ್ದಾಂ ಅಥವಾ ನೊಂದಾಯಿತ ಅಂಚೆ  ಮುಖಾಂತರ ದೃಢೀಕೃತ ದಾಖಲಾತಿಗಳನ್ನು ಕಳುಹಿಸಲು ಸೂಚನೆ ನೀಡಲಾಗಿದೆ. ನಂತರ ಬಂದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಗಣಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಆರ್. ವಿನೋತ್ ಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.