ಚಿತ್ರದುರ್ಗ: ಗ್ರಾಮೀಣ ಭಾಗಗಳಲ್ಲಿ ಜನತೆಗೆ ಶುದ್ದವಾದ ಕುಡಿಯುವ ನೀರು ಪೂರೈಸಲು ಮೊದಲ ಆದ್ಯತೆ ಕೊಡಿ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚನೆ ನೀಡಿದರು.

ತುರುವನೂರು ಹೋಬಳಿಗೆ ಸಂಬಂಧಿಸಿದಂತೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕರೆಯಲಾಗಿದ್ದ ಸಭೆಯಲ್ಲಿ ಪ್ರಗತಿ ಪರಿಶೀಲಿಸಿದ ಶಾಸಕರು ಕುಡಿಯುವ ನೀರು, ಸ್ವಚ್ಚತೆ, ಪಡಿತರ ವಿತರಣೆ, ಸಾಮಾಜಿಕ ಭದ್ರತೆಯಡಿ ನೀಡುವ ಪಿಂಚಣಿ, ತೋಟಗಾರಿಕೆ, ಕೃಷಿ, ಬೆಸ್ಕಾಂ ಇಲಾಖೆಗಳಿಗೆ ಸಂಬಂಧಪಟ್ಟ ಕುಂದುಕೊರತೆಗಳನ್ನು ಕೇಳಿ ಕೊರೋನಾ ವೈರಸ್ ಹಾವಳಿಯಿಂದ ಹಳ್ಳಿಗಳಲ್ಲಿ ಜನ ಭಯಭೀತರಾಗಿದ್ದಾರೆ. ಹೊರ ರಾಜ್ಯಗಳಿಂದ ಬರುವವರನ್ನು ಸಾಧ್ಯವಾದಷ್ಟು ಗ್ರಾಮೀಣ ಪ್ರದೇಶಗಳಿಂದ ಹೊರಗೆ ಕ್ವಾರೆಂಟೈನ್‌ನಲ್ಲಿಡಲು ಅಧಿಕಾರಿಗಳು ವ್ಯವಸ್ಥೆ ಮಾಡಿಕೊಳ್ಳಬೇಕು. ಸದಸ್ಯ ಪರಿಸ್ಥಿತಿಯಲ್ಲಿ ಎಲ್ಲೆಲ್ಲಿ ಆರ್.ಓ.ಪ್ಲಾಂಟ್‌ಗಳು ಸುಸ್ಥಿತಿಯಲ್ಲಿಲ್ಲವೋ ಅಂತಹವುಗಳನ್ನು ತ್ವರಿತವಾಗಿ ರಿಪೇರಿ ಮಾಡಿಸಿ ಗ್ರಾಮೀಣ ಜನರಿಗೆ ಶುದ್ದ ಕುಡಿಯುನ ನೀರು ಪೂರೈಸುವ ಹೊಣೆಗಾರಿಕೆ ಗ್ರಾಮ ಪಂಚಾಯಿತಿಗಳ ಮೇಲಿದೆ ಜವಾಬ್ದಾರಿ ಅರಿತು ಕೆಲಸ ಮಾಡಿ ಮೈಗಳ್ಳತನ ಮಾಡಿದರೆ ಸಹಿಸುವುದಿಲ್ಲವೆಂದು ಎಚ್ಚರಿಸಿದರು.

ಲಾಕ್‌ಡೌನ್ ಸ್ವಲ್ಪ ಸಡಿಲಿಕೆಯಾಗಿರುವುದರಿಂದ ಹೆದ್ದಾರಿಗಳಲ್ಲಿ ಸಾಕಷ್ಟು ವಾಹನಗಳು ಸಂಚರಿಸುತ್ತಿವೆ. ಹೈದರಾಬಾದ್‌ನಿಂದ ಮೆಂಬ್ರೇನ್ ಬರಬೇಕೆಂದು ನೆಪ ಹೇಳಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಹಾಳಾಗಲು ಬಿಡಬೇಡಿ. ಕಾರ್ಮಿಕರು ಸಿಗುತ್ತಾರೆ. ಹಳ್ಳಿಗಾಡಿನಲ್ಲಿ ಜನರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಿ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳಿಗೆ ತಾಕೀತು ಮಾಡಿದ ಶಾಸಕರು ತಾಲ್ಲೂಕಿನಲ್ಲಿರುವ ಎಲ್ಲಾ ಅಧಿಕಾರಿಗಳನ್ನು ಕೋಆರ್ಡಿನೇಟ್ ಮಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವುದರತ್ತ ಗಮನ ಕೊಡಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ತಿಳಿಸಿದರು.
ತುರುವನೂರು ಹೋಬಳಿಯ ಆರು ಪಂಚಾಯಿತಿಗಳ ಪಿಡಿಓ. ಕಾರ್ಯದರ್ಶಿ, ಗ್ರಾಮ ಲೆಕ್ಕಾಧಿಕಾರಿಗಳಿಗೆ ತಿಳಿಸಿದರು.

ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಎಂ.ಲಿಂಗರಾಜು, ತಾಲ್ಲೂಕು ಪಂಚಾಯ ತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣನಾಯ್ಕ ಸಭೆಯಲ್ಲಿದ್ದರು.
ಬೆಸ್ಕಾಂ ಇಂಜಿನಿಯರ್‌ಗಳು ಸೇರಿದಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು, ವೈದ್ಯರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದರು.